ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹತ್ತಿ ತುಂಬಿದ್ದ ಲಾರಿ ಧಗ ಧಗ - ಹಾವೇರಿಯಲ್ಲಿ ಹೊತ್ತಿ ಉರಿದ ಹತ್ತಿ ತುಂಬಿದ್ದ ಲಾರಿ
🎬 Watch Now: Feature Video
ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹತ್ತಿ ತುಂಬಿದ್ದ ಲಾರಿ ಧಗ ಧಗನೇ ಹೊತ್ತಿ ಉರಿದಿದೆ. ಬೆಂಗಳೂರು ಕಡೆಯಿಂದ ಹುಬ್ಬಳ್ಳಿಯತ್ತ ಹೊರಟಿದ್ದ ಲಾರಿ ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.