ಅಣ್ಣಿಗೇರಿ ಹತ್ತಿ ಜಿನ್ನಿಂಗ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಕಾಟನ್ ಭಸ್ಮ - Fire incident at Annigheri Cotton Factory
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5603875-thumbnail-3x2-cctt.jpg)
ಹುಬ್ಬಳ್ಳಿ: ಇಲ್ಲಿನ ಅಣ್ಣಿಗೇರಿಯ ಹತ್ತಿ ಅರಿಯುವ (ಜಿನ್ನಿಂಗ್) ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಹುಬ್ಬಳ್ಳಿ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಅಣ್ಣಿಗೇರಿಯ ಜಗದೀಶ್ ಹುಬ್ಬಳ್ಳಿ ಎಂಬುವರ ಮಾಲೀಕತ್ವದ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಸುಮಾರು ಒಂದೂವರೆ ಕೋಟಿಗೂ ಅಧಿಕ ಮೌಲ್ಯದ ಹತ್ತಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.