ಗಣಿನಗರಿಯಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ - ಬಳ್ಳಾರಿ ಲೇಟೆಸ್ಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10877523-thumbnail-3x2-bngjpg.jpg)
ಬಳ್ಳಾರಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಸಂಗಮ್ ವೃತ್ತದ ಸಮೀಪಲ್ಲಿರುವ ಐದು ಆಟೋ ಗ್ಯಾರೇಜ್ಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಒಂದರಲ್ಲಿ ಕೆಳಗಡೆ ಬಿದ್ದಿದ್ದ ಆಯಿಲ್ಗೆ ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಈ ಅವಘಡ ಸಂಭವಿಸಿದೆ. ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿ ಬಸವರಾಜ ನೇತೃತ್ವದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.