ಕಾರ್ಯ ಸಿದ್ದೇಶ್ವರ ಬೆಟ್ಟಕ್ಕೆ ಬೆಂಕಿ; ಅಗ್ನಿ ಶಮನಕ್ಕೆ ಹರಸಾಹಸ - Mysore
🎬 Watch Now: Feature Video

ಮೈಸೂರು: ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿ ವ್ಯಾಪ್ತಿಯ ಕಾರ್ಯ ಗ್ರಾಮದಲ್ಲಿರುವ ಕಾಡ ಸಿದ್ದೇಶ್ವರ ಬೆಟ್ಟದ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಗಾಳಿಗೆ ಬೆಂಕಿ ವೇಗವಾಗಿ ಹರಡುತ್ತಿರುವುದನ್ನು ಕಂಡ ಪ್ರಾಣಿ-ಪಕ್ಷಿಗಳು ದಿಕ್ಕಾಪಾಲಾಗಿ ಓಡಿವೆ. ಸದ್ಯ ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.