ಆಕಸ್ಮಿಕ ಅಗ್ನಿ ಅವಘಡ: ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತಗಳು ಬೆಂಕಿಗಾಹುತಿ - Fire incident latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7617906-511-7617906-1592151692604.jpg)
ಭಟ್ಕಳ: ತಾಲ್ಲೂಕಿನ ಮುಖ್ಯ ರಸ್ತೆಯಲ್ಲಿನ ಐಷಾ ಪ್ಲಾಜಾ ಎದುರಿನ ಕಟ್ಟಡದಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಮಹ್ಮದ್ ನೂಹ್ ರುಕ್ನುದ್ದೀನ್ ಎನ್ನುವವರಿಗೆ ಸೇರಿದ ಕಟ್ಟಡ ಇದಾಗಿದೆ. ಭಾನುವಾರ ಇವರು ವಾಸಿಸುತ್ತಿದ್ದ ಮನೆಗೆ ಬೆಂಕಿ ತಗುಲಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಮನೆಯಲ್ಲಿರುವ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಇವರು ಮದುವೆ ಸೇರಿ ಇತರ ಶುಭ ಸಮಾರಂಭಗಳಿಗೆ ಡೇಕೋರೆಟರ್ ಆಗಿ ಕೆಲಸ ಮಾಡುತ್ತಿದ್ದರು.
Last Updated : Jun 14, 2020, 11:07 PM IST