ಬೆಂಕಿ ಕೆನ್ನಾಲಿಗೆಗೆ ನಾಲ್ಕು ಅಂಗಡಿಗಳು ಭಸ್ಮ - ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ
🎬 Watch Now: Feature Video
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನಾಲ್ಕು ಅಂಗಡಿಗಳು ಬೆಂಕಿಗಾಹುತಿ ಆಗಿರುವ ಘಟನೆ ವಿಜಯಪುರ ನಗರದ ಕೆ.ಸಿ. ಮಾರ್ಕೆಟ್ನಲ್ಲಿ ನಡೆದಿದೆ. ಶಿವಗಂಗಾ ಎಲೆಕ್ಟ್ರಾನಿಕ್ ಅಂಗಡಿ ಸೇರಿ ನಾಲ್ಕು ಅಂಗಡಿಗೆ ಬೆಂಕಿಗೆ ತುತ್ತಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ವಿಜಯಪುರ ಗಾಂಧಿಚೌಕ್ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.