ಟ್ರ್ಯಾಕ್ಟರ್ ನಲ್ಲಿದ್ದ ಮೆಕ್ಕೆಜೋಳ ಮೇವಿಗೆ ಬೆಂಕಿ... ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಅನಾಹುತ
🎬 Watch Now: Feature Video
ಚಿತ್ರದುರ್ಗ: ಟ್ರ್ಯಾಕ್ಟರ್ ನಲ್ಲಿದ್ದ ಮೆಕ್ಕೆಜೋಳದ ಮೇವಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿ ಉರಿದಿರುವ ಘಟನೆ ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಚನ್ನಕೇಶವ ಎನ್ನುವರಿಗೆ ಸೇರಿದ ಮೇವಿಗೆ ಬೆಂಕಿ ಬಿದ್ದಿದ್ದು, ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇನ್ನು ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ್ದು, ಟ್ರ್ಯಾಕ್ಟರ್ ಗೆ ಯಾವುದೇ ಹಾನಿಯಾಗಿಲ್ಲ. ಬೆಂಕಿ ಹೊತ್ತಿಕೊಂಡಿದ್ದನ್ನ ಗಮನಿಸಿದ ಚಾಲಕ ಊರ ಹೊರಗೆ ಹೋಗಿ ಟ್ರಾಲಿಯಲ್ಲಿದ್ದ ಮೆಕ್ಕೆಜೋಳದ ಸೊಪ್ಪೆಯನ್ನು ಕೆಳಗಿಳಿಸುವ ಮೂಲಕ ಅನಾಹುತ ತಪ್ಪಿಸಿದ್ದಾರೆ.