ಸೋಮಾವತಿ ನದಿಗೆ ವಿಷ ಬೆರಸಿರುವ ಅನುಮಾನ : ಮೀನುಗಳ ಮಾರಣಹೋಮ - ಸೋಮಾವತಿ ನದಿಗೆ ವಿಷ ಬೆರಸಿರುವ ಅನುಮಾನ
🎬 Watch Now: Feature Video

ಬೆಳ್ತಂಗಡಿ: ನಗರಸಭೆ ವ್ಯಾಪ್ತಿಯಲ್ಲಿ ಕೆಲವು ವಾರ್ಡ್ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಅನುಮಾನ ವ್ಯಕ್ತವಾಗಿದ್ದು, ಮೀನುಗಳ ಮಾರಣ ಹೋಮವೇ ನಡೆದಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ವಿಷ ಪದಾರ್ಥ ಬೆರೆಸಿ ಮೀನು ಹಿಡಿಯಲು ಯತ್ನಿಸಿ ನೀರನ್ನು ಕುಲುಷಿತಗೊಳಿಸಿದ ಪರಿಣಾವಾಗಿ ಮೀನುಗಳು ಸಾವನ್ನಪ್ಪಿವೆ. ರಾತ್ರಿ ಐದಾರು ಮಂದಿಯ ತಂಡ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ವಯ ಬೆಳ್ತಂಗಡಿ ಠಾಣೆಯ ಎಸ್.ಐ. ನಂದಕುಮಾರ್ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದಾಗ ಕಿಡಿಗೇಡಿಗಳು ಕತ್ತಲಲ್ಲಿ ಪರಾರಿಯಾಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಮುಖ್ಯಾಧಿಕಾರಿ ಸುಧಾಕರ್ ಹೇಳಿದರು.