ಗದಗದಲ್ಲಿ ಇಳಿದ ಪ್ರವಾಹ, ಇಳಿಯದೇ ಹೋಯ್ತು ಜನರ ಸಂಕಷ್ಟ..! - ಗದಗ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4136061-thumbnail-3x2-sanju.jpg)
ಗದಗ ಜಿಲ್ಲೆಯಾದ್ಯಂತ ಮಹಾಮಳೆಗೆ ಮಲಪ್ರಭೆಯಲ್ಲಿ ಉಂಟಾಗಿದ್ದ ಪ್ರವಾಹ ಸ್ವಲ್ಪ ಮಟ್ಟಿಗೆ ತಗ್ಗಿದೆ. ಜನರು ತಮ್ಮ ತಮ್ಮ ಗ್ರಾಮಗಳಿಗೆ ಮರಳಿ, ಮನೆಗಳನ್ನು ಸ್ವಚ್ಛಗೊಳಿಸುವಲ್ಲಿ ನಿರತರಾಗಿದ್ದಾರೆ. ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ಅದೆಷ್ಟೋ ಕುಟುಂಬಗಳ ಬದುಕು ಅಕ್ಷರಶಃ ಬೀದಿಗೆ ಬಿದ್ದಿದೆ. ನರಗುಂದ ತಾಲೂಕಿನ ಕೊಣ್ಣೂರು ಗ್ರಾಮವೊಂದರಲ್ಲೇ, ಸುಮಾರು 1,200 ಕ್ಕೂ ಹೆಚ್ಚು ಮನೆಗಳು ಪ್ರವಾಹದ ಹೊಡೆತಕ್ಕೆ ಕುಸಿದು ಬಿದ್ದಿವೆ. ಗ್ರಾಮಸ್ಥರೆಲ್ಲರೂ ತಮ್ಮ ತಮ್ಮ ಮನೆಗಳನ್ನು ಸ್ವಚ್ಛಗೊಳಿಸುವಲ್ಲಿ ನಿರತರಾಗಿದ್ದಾರೆ.