'ಮಹಾ' ಮಳೆಗೆ ಬಾಗಲಕೋಟೆ ಜನ ಜೀವನ ತತ್ತರ: ಸಂತ್ರಸ್ತರ ಶೆಡ್ಡುಗಳಿಗೂ ನುಗ್ಗಿದ ನೀರು - Hidakal reservoir
🎬 Watch Now: Feature Video
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದಾಗಿ ಮುಧೋಳ ಪಟ್ಟಣ ನಮೀಪದ ಯಾದವಾಡ ಸೇತುವೆ ಮುಳುಗಡೆಯಾಗಿದೆ. ಕಳೆದ ತಿಂಗಳಷ್ಟೇ ಪ್ರವಾಹದಿಂದ ಮುಳುಗಡೆಯಾಗಿತ್ತು. ಇನ್ನು ಮುಧೋಳ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ಸಂತ್ರಸ್ತರಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್ಡುಗಳಿಗೆ ನೀರು ನುಗ್ಗಿದ್ದು, ಜನರ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ.