ನಿಲ್ಲದ ಮಳೆಯಾರ್ಭಟ: ದಾಖಲೆ ಮಳೆಗೆ ತತ್ತರಿಸಿ ಹೋದ ಕರುನಾಡು! - ಬೀದರ್ನಲ್ಲಿ ಭಾರೀ ಮಳೆ
🎬 Watch Now: Feature Video

ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದ್ದು, ಕೆಲವೊಂದು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ರಮುಖವಾಗಿ ಬೀದರ್, ಕಲಬುರಗಿ, ಯಾದರಿಗಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ರೈತರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ವಿವಿಧ ಪ್ರದೇಶಗಳಲ್ಲಿ ರೈತರ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.