ಅಂಗನವಾಡಿ ಶಿಕ್ಷಕಿಯಿಂದ ಆಹಾರ ಪದಾರ್ಥ ಕಳವು ಆರೋಪ : ವಿಡಿಯೋ ವೈರಲ್ - ಶಿರಸಿ ತಾಲೂಕಿನಲ್ಲಿ ಅಂಗನವಾಡಿ ಶಿಕ್ಷಕಿಯಿಂದ ಆಹಾರ ಪದಾರ್ಥ ಕಳವು ಆರೋಪ
🎬 Watch Now: Feature Video

ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ನೀಡಲಾಗುವ ಆಹಾರ ಪದಾರ್ಥಗಳನ್ನು ಸ್ವತಃ ಶಿಕ್ಷಕಿಯೇ ಕದ್ದೊಯ್ಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಿಕ್ಷಕಿ ಆಹಾರ ಸಾಮಗ್ರಿಗಳನ್ನು ಕದ್ದೊಯ್ಯುತ್ತಿದ್ದರು ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶಿರಸಿ ತಾಲೂಕಿನ ಹೆಬ್ಬತ್ತಿಯ ಅಂಗನವಾಡಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಅಲ್ಲಿನ ಶಿಕ್ಷಕಿ ಶಾಲೆಯ ಮಕ್ಕಳಿಗಾಗಿ ನೀಡುವ ಆಹಾರ ಪದಾರ್ಥಗಳನ್ನು ಕದ್ದು ಸಾಗಿಸುತ್ತಿದ್ದಾಗ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ಶಿಕ್ಷಕಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್ ಅಂಗನವಾಡಿ ಶಾಲೆಗೆ ಭೇಟಿ ನೀಡಿ, ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದಿದ್ದಾರೆ.