ಕೋಲಾರಕ್ಕೆ ಆಗಮಿಸಿದ ಸಿದ್ದರಾಮಯ್ಯಗೆ ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ - Former CM Siddaramaiah visit to kolar
🎬 Watch Now: Feature Video
ಕೋಲಾರ: ಇಂದು ಕೋಲಾರದಲ್ಲಿ ನಡೆಯಲಿರುವ ಅಹಿಂದ ಸಮಾವೇಶಕ್ಕೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯರನ್ನು ರಾಮಸಂದ್ರ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಸಿದ್ದರಾಮಯ್ಯಗೆ ಬೆಳ್ಳಿಯ ಗದೆ ಕೊಟ್ಟು, ಬೃಹತ್ ಹಾರ ಹಾಕಿ ಬರಮಾಡಿಕೊಂಡರು. ಇದೇ ವೇಳೆ ಕೋಲಾರ ಹೊರವಲಯದಲ್ಲಿರುವ ಕೊಂಡರಾಜನಗಳ್ಳಿ ಬಳಿಯಿರುವ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ, ಪೂಜೆ ಸಲ್ಲಿಸಿದರು. ಬಳಿಕ ಕ್ಲಾಕ್ ಟವರ್ ಬಳಿಯಿರುವ ದರ್ಗಾಗೆ ಭೇಟಿ ನೀಡಿದರು. ಈ ವೇಳೆ ಶಾಸಕರಾದ ಎಸ್.ಎನ್. ನಾರಾಯಣಸ್ವಾಮಿ, ನಂಜೇಗೌಡ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.