ಭಟ್ಟರ 'ಖಾಲಿ ಕ್ವಾಟ್ರು..'ಹಾಡಿಗೆ ಕುಷ್ಟಗಿ ಪುರಸಭೆ ಕಾಂಗ್ರೆಸ್ ಸದಸ್ಯರ ನೃತ್ಯ: ವಿಡಿಯೋ - ಕುಷ್ಟಗಿ ಕಾಂಗ್ರೆಸ್ ಸದಸ್ಯರ ಮೋಜು ಮಸ್ತಿ ವಿಡಿಯೋ ವೈರಲ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9279781-938-9279781-1603429726930.jpg)
ಕುಷ್ಟಗಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಅಜ್ಞಾತ ಪ್ರದೇಶಕ್ಕೆ ಪ್ರವಾಸ ತೆರಳಿದ್ದ ಕಾಂಗ್ರೆಸ್ ಸದಸ್ಯರು ಸಿನಿಮಾ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಸದಸ್ಯರು, ಸದಸ್ಯೆಯರ ಪತಿಯಂದಿರು ಹಾಗು ಪುತ್ರರು ಈ ವೇಳೆ ಭಾಗಿಯಾಗಿದ್ದರು ಎಂಬ ಮಾಹಿತಿ ದೊರೆತಿದೆ. ಮಳೆಯಿಂದ ಜನರು ಹಲವು ರೀತಿಯ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಇವುಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಹೀಗೆ ಮೋಜು, ಮಸ್ತಿಯಲ್ಲಿ ತೊಡಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.