ಕಲಬುರಗಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ - ಗ್ರೌಂಡ್ ರಿಪೋರ್ಟ್ - ಕಲಬುರಗಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ
🎬 Watch Now: Feature Video
ಕಲಬುರಗಿ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣಾ ಮತದಾನ ಇಂದು ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡ ಮತದಾನ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಮೊದಲ ಹಂತದಲ್ಲಿ ಕಲಬುರಗಿ, ಆಳಂದ, ಅಫಜಲಪುರ, ಕಮಲಾಪುರ, ಕಾಳಗಿ, ಶಹಾಬಾದ ತಾಲೂಕಿನ 126 ಗ್ರಾಮ ಪಂಚಾಯಿತಿಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು13,26,400 ಮತದಾರರಿದ್ದು, 997 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈಗಾಗಲೇ 141 ಅಭ್ಯರ್ಥಿಗಳನ್ನು ಅವಿರೋಧ ಆಯ್ಕೆ ಮಾಡಲಾಗಿದೆ. 2,096 ಸದಸ್ಯರು ಸ್ಪರ್ಧಾ ಕಣದಲ್ಲಿದ್ದಾರೆ. 140 ಚುನಾವಣಾಧಿಕಾರಿಗಳು, 140 ಉಪ ಚುನಾವಣಾ ಅಧಿಕಾರಿಗಳು ಸೇರಿದಂತೆ 5,490 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಎಸ್ಪಿ, ಎಎಸ್ಪಿ, ಡಿವೈಎಸ್ಪಿ, ಸಿಪಿಐ, ಪಿಎಸ್ಐ, ಕೆಎಸ್‌ಆರ್‌ಪಿ ತುಕಡಿ ಸೇರಿ 1786 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.