ಗದಗದ ಪೊಲೀಸ್ ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ - gadag latest news
🎬 Watch Now: Feature Video
ಗದಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮೈದಾನದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಶೈಕ್ಷಣಿಕ ವರ್ಷದಲ್ಲಿ ಮರಣ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಎಸ್ಪಿ ಯತೀಶ್ ಎನ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಥ ಸಂಚಲನ ನಡೆಸಿ, ವೀರಗಲ್ಲಿಗೆ ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ನ್ಯಾಯಾಧೀಶರು ಸೇರಿ ಹಲವರು ಉಪಸ್ಥಿತರಿದ್ದರು.