ತುಂಗಾಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ಗಂಗಾವತಿ - ಕಂಪ್ಲಿ ನಡುವಿನ ಸೇತುವೆ ಸಂಪೂರ್ಣ ಮುಳುಗಡೆ - kannadanews
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4103463-thumbnail-3x2-surya.jpeg)
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನದಿಗೆ ನೀರು ಹರಿಬಿಡಲಾಗಿದೆ. ನದಿಗೆ ಸುಮಾರು 1 ಲಕ್ಷದ 30 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಜಿಲ್ಲೆಯ ಗಂಗಾವತಿ ಹಾಗೂ ಕಂಪ್ಲಿ ನಡುವಿನ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಗಂಗಾವತಿ ಹಾಗೂ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಡುವೆ ಸಂಪರ್ಕ ಕಲ್ಪಿಸುವ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಈ ಸೇತುವೆಯ ಮೇಲೆ ಈಗ ನೀರು ಹರಿಯುತ್ತಿದ್ದು, ಸಂಚಾರ ಸ್ಥಗಿತಗೊಂಡಿದೆ.
Last Updated : Aug 11, 2019, 1:39 PM IST