ಶಿವಮೊಗ್ಗದಲ್ಲಿ ಶ್ರೇಷ್ಠಿ ಪಾರ್ಕ್ನಲ್ಲಿ ಸರಳವಾಗಿ ಗೌರಿ ಹಬ್ಬ ಆಚರಣೆ - Gauri festival celebration
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8504614-570-8504614-1598005698603.jpg)
ಶಿವಮೊಗ್ಗ: ಗೌರಿ ಹಬ್ಬದ ನಿಮಿತ್ತ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗುತ್ತಿದೆ. ಭಕ್ತಾದಿಗಳು ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಬಂದು ಗೌರಿಯ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ರಾಮಣ್ಣ ಶ್ರೇಷ್ಠಿ ಪಾರ್ಕ್ನಲ್ಲಿ ಗೌರಿ ಹಾಗೂ ಗಣೇಶ ಪ್ರತಿಷ್ಠಾಪನೆಗೆ 91 ವರ್ಷಗಳ ಇತಿಹಾಸ ಇದೆ. ಇದೇ ಮೊದಲ ಬಾರಿಗೆ ಗೌರಿಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಪ್ರತಿವರ್ಷ ಅದ್ದೂರಿಯಾಗಿ 21 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ, ಈ ವರ್ಷ ಕೊರೊನಾ ಭೀತಿಯಿಂದ ಸರಳವಾಗಿ ಗೌರಿ - ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಜಿಲ್ಲಾಡಳಿತದ ಎಲ್ಲ ನಿಯಮಗಳೊಂದಿಗೆ ಗೌರಿಯನ್ನು ಪ್ರತಿಷ್ಠಾಪಿಸಿ, ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಸ್ಥಾನ ಕಮಿಟಿ ಖಜಾಂಚಿ ಮಾಹಿತಿ ನೀಡಿದರು.