ಜಿಲ್ಲಾ ಮಟ್ಟದ ಥ್ರೋ ಬಾಲ್ ಸ್ಪರ್ಧೆಯಲ್ಲಿ ಗೀತಾ ಆಂಗ್ಲ ಶಾಲೆಗೆ ಪ್ರಶಸ್ತಿ - Geetha English School
🎬 Watch Now: Feature Video
ನೆಲಮಂಗಲ:14 ವರ್ಷ ವಯೋಮಿತಿಯ ಬಾಲಕಿಯರ ಜಿಲ್ಲಾ ಮಟ್ಟದ ಥ್ರೋ ಬಾಲ್ ಸ್ಪರ್ಧೆಯಲ್ಲಿ ಗೀತಾ ಆಂಗ್ಲ ಮಾಧ್ಯಮ ಶಾಲೆ ಪ್ರಶಸ್ತಿ ಗೆಲ್ಲುವ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ನೆಲಮಂಗಲ ತಾಲೂಕಿನ ದಾಬಸ್ಪೇಟೆಯ ಗೀತಾ ಆಂಗ್ಲ ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಥ್ರೋ ಬಾಲ್ ಸ್ಪರ್ಧೆ ನಡೆಯಿತು. ಪಂದ್ಯಾವಳಿಯಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆ ತಂಡಗಳು ಪಾಲ್ಗೊಂಡಿದ್ದು, ಬಿಇಒ ಫರ್ವಿನ್ ತಾಜ್, ಬಾಲ್ ಸರ್ವ್ ಮಾಡುವ ಮೂಲಕ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿದ್ರು.