ಗುಡ್ಡ ಕುಸಿತ ಸಾಧ್ಯತೆ: ಮತ್ತೆ ಚಾರ್ಮಾಡಿ ಘಾಟ್ ವಾಹನ ಸಂಚಾರಕ್ಕೆ ಬ್ರೇಕ್ - charmadi road closed
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4292213-thumbnail-3x2-charmadi.jpg)
ಚಿಕ್ಕಮಗಳೂರು : ಚಾರ್ಮಾಡಿ ರಸ್ತೆಯಲ್ಲಿ ವಾಹನ ಸಂಚಾರ ನಿಲ್ಲಿಸುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಇಂದು ಮತ್ತೆ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಲಘು ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಆದರೆ ಗುಡ್ಡ ಕುಸಿಯುವ ಸಾಧ್ಯತೆ ಇರೋದ್ರಿಂದ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದ್ದು ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚಾರ್ಮಾಡಿ ಘಾಟ್ ರಸ್ತೆ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನಗಳು ಬೇಕಾಗಿದೆ ಎಂಬ ಪೊಲೀಸರ ವರದಿಯನ್ನು ಆಧರಿಸಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.