ಕರ್ನಾಟಕ ಬಂದ್ಗೆ ಯಾದಗಿರಿಯಲ್ಲಿ ಉತ್ತಮ ಪ್ರತಿಕ್ರಿಯೆ - ಯಾದಗಿರಿ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8965498-410-8965498-1601270368378.jpg)
ಯಾದಗಿರಿ: ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ರೈತರು ಪ್ರತಿಭಟನೆಗೆ ಬೆಂಬಲ ನೀಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ವ್ಯಾಪಾರಸ್ಥರು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ ಸಂಚಾರ ಎಂದಿನಂತೆ ನಡೆಯುತ್ತಿದೆ. ಬಂದ್ ಹಿನ್ನೆಲೆ ಯಾದಗಿರಿ ಸರ್ವ ಹೋರಾಟ ಸಂಘಟನಾ ಒಕ್ಕೂಟದೊಂದಿಗೆ 22ಕ್ಕೂ ಹೆಚ್ಚು ಸಂಘಟನೆಗಳು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಈ ಮೂಲಕ ನಗರದ ಪ್ರಮುಖ ವೃತ್ತಗಳಲ್ಲಿ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.