ತುಮಕೂರಿನಲ್ಲಿ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ: ಗ್ರೌಂಡ್ ರಿಪೋರ್ಟ್
🎬 Watch Now: Feature Video
ತುಮಕೂರು ಜಿಲ್ಲೆಯಲ್ಲಿಯೂ ಕೂಡ 3ನೇ ವಾರದ ಭಾನುವಾರದ ಲಾಕ್ಡೌನ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಗತ್ಯ ವಸ್ತುಗಳ ಮಾರಾಟ ಹೊರತುಪಡಿಸಿ ಉಳಿದಂತೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬಹುತೇಕ ರಸ್ತೆಗಳು ವಾಹನ ಸಂಚಾರವಿಲ್ಲದೆ ಖಾಲಿಯಾಗಿದ್ದವು. ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರೇ ವಹಿವಾಟು ನಿಲ್ಲಿಸಿ ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಥ್ ಕೊಟ್ಟಿದ್ದಾರೆ.