ಜನತಾ ಕರ್ಫ್ಯೂಗೆ ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ! - ಕೊರೊನಾ ವೈರ
🎬 Watch Now: Feature Video
ಧಾರವಾಡ: ಕೊರೊನಾ ವೈರಸ್ ವಿರುದ್ಧ ಹೋರಾಡಲು ದೇಶಾದ್ಯಂತ ಪ್ರಧಾನಿ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ವಿದ್ಯಾಕಾಶಿ ಧಾರವಾಡದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದವು. ಕೆಲ ಖಾಸಗಿ ವಾಹನಗಳನ್ನು ಹೊರತುಪಡಿಸಿದ್ರೆ, ಬಹುತೇಕ ಎಲ್ಲಾ ವಾಹನಗಳ ಸಂಚಾರ ನಿಲ್ಲಿಸಲಾಗಿತ್ತು. ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಹೊಸಯಲ್ಲಾಪೂರ ವ್ಯಾಪ್ತಿಯ 3 ಕಿ.ಮೀ ಕಂಟೈನ್ಮೆಂಟ್ ಹಾಕಲಾಗಿದೆ. ಕೆಲ ಕಡೆ ಚೆಕ್‌ಪೋಸ್ಟ್ ನಿರ್ಮಿಸಿ ಒಳಬರುವ ಮತ್ತು ಹೊರಹೋಗುವ ವಾಹನ ಹಾಗೂ ಜನರನ್ನು ತಪಾಸಣೆ ನಡೆಸಲಾಗುತ್ತಿದೆ.