ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​ಗೆ ಗುದ್ದಿದ ಬಸ್.. 20ಕ್ಕೂ ಅಧಿಕ ಮಂದಿಗೆ ಗಾಯ

By

Published : Oct 13, 2019, 4:57 PM IST

thumbnail
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್​ವೊಂದು ಡಿಪೋದ ಕಾಂಪೌಂಡ್​ಗೆ ಗುದ್ದಿದ ಘಟನೆ ಗದಗ ಜಿಲ್ಲೆ ರೋಣ ಪಟ್ಟಣದಲ್ಲಿ ನಡೆದಿದೆ.‌ ಗದಗದಿಂದ ಬಾಗಲಕೋಟೆಗೆ ಹೊರಟಿದ್ದ ಬಸ್‌ ಇದಾಗಿದ್ದು, ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ರೋಣ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅತಿಯಾದ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.