ಕೊರೊನಾ ವೈರಸ್ ವಿರುದ್ಧ ಹೋರಾಡುವುದೇ ನಮ್ಮ ಸರ್ಕಾರದ ಆದ್ಯತೆ: ದಿಗ್ವಿಜಯ್ ಸಿಂಗ್ - coronavirus
🎬 Watch Now: Feature Video
ಬೆಂಗಳೂರು: ಮಾರಣಾಂತಿಕ ವೈರಸ್ ವಿರುದ್ಧ ಹೋರಾಡುವುದೇ ನಮ್ಮ ಸರ್ಕಾರದ ಮುಖ್ಯ ಆದ್ಯತೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದರು. ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟಿನ ಕುರಿತು ನಡೆಸಿದ ಪತ್ರಿಕಾಗೋಷ್ಠಿ ನಂತರ 'ಈಟಿವಿ ಭಾರತ' ಜೊತೆ ಮಾತನಾಡಿದ ಅವರು, ಈಗಾಗಲೇ ಮಧ್ಯಪ್ರದೇಶ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚೆರಿಕಾ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ. ಬಿಜೆಪಿಯು ಅಧಿಕಾರದಲ್ಲಿರುವ ಸರ್ಕಾರವನ್ನು ದೂಷಿಸುವ ಬದಲಿಗೆ ಕೊರೊನಾ ವಿರುದ್ಧ ಹೋರಾಡಲು ಕೈಜೋಡಿಸಲಿ ಎಂದು ಒತ್ತಾಯಿಸಿದರು.
Last Updated : Mar 19, 2020, 5:44 PM IST