ಬಾಗಲಕೋಟೆಯನ್ನು ರೆಡ್ ಝೋನ್ ಎಂದು ಘೋಷಿಸಿದ ಕೇಂದ್ರ ಸರ್ಕಾರ - ಬಾಗಲಕೋಟೆ ಲೆಟೆಸ್ಟ್ ನ್ಯೂಸ್
🎬 Watch Now: Feature Video
ಬಾಗಲಕೋಟೆ: ಜಿಲ್ಲೆಯನ್ನು ಕೇಂದ್ರ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದ್ದು, ಸೋಂಕಿತ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗಾಗಲೇ ಸೋಂಕಿತರು ಮೃತಪಟ್ಟಿರುವ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಸವೇಶ್ವರ ವೃತ್ತದಿಂದ ವಲ್ಲಭ ಭಾಯಿ ವೃತ್ತದ ಚೌಕಗೆ ಹೋಗುವ ರಸ್ತೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಅಗತ್ಯ ವಸ್ತುಗಳನ್ನು ಪೂರೈಸುವ ಸಿಬ್ಬಂದಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಈ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ಸಮಗ್ರ ಮಾಹಿತಿ ನೀಡಿದ್ದಾರೆ.