ಪ್ರತ್ಯಕ್ಷ ವರದಿ: ವಿವಾದದ ಕೇಂದ್ರ ಬಿಂದು ಯಲಹಂಕದ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅನುವು - ಯಲಹಂಕದ ಮೇಲ್ಸೇತುವೆ
🎬 Watch Now: Feature Video
ದೇವನಹಳ್ಳಿ: ವಿವಾದದ ಕೇಂದ್ರ ಬಿಂದುವಾಗಿರುವ ಯಲಹಂಕ ಮೇಲ್ಸೇತುವೆ ಇಂದು ಮುಖ್ಯಮಂತ್ರಿಗಳಿಂದ ಉದ್ಘಾಟನೆಯಾಗಬೇಕಿತ್ತು. ಸೇತುವೆಗೆ ವೀರ ಸಾವರ್ಕರ್ ಹೆಸರಿಡಲು ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್ ಬಿಬಿಎಂಪಿಯಿಂದ ಅನುಮತಿ ಪಡೆದಿದ್ದರು. ಆದರೆ ಸೇತುವೆಗೆ ವೀರ ಸಾವರ್ಕರ್ ಹೆಸರಿಡುವುದಕ್ಕೆ ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.