ಹೇಮಾವತಿಯಲ್ಲಿ ಗೌರಿಯನ್ನು ಬೀಳ್ಕೊಟ್ಟ ಹೆಂಗಳೆಯರು - Chikamagalur
🎬 Watch Now: Feature Video

ಕಳೆದ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ಇಂದು ಬೇಸರದಿಂದ ಹೆಂಗಳೆಯರು ಕಳಿಸಿ ಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಮ್ಮನಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ನದಿ ತೀರದಲ್ಲಿ ಸೇರಿದ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನು ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ ಮಟ್ಟ ಕಡಿಮೆಯಾಗಿದೆ. ವಾರದ ಹಿಂದೆ ನದಿ ನೀರಿಗೆ ಗದ್ದೆಗಳು ಜಲಾವೃತಗೊಂಡಿದ್ದವು. ಸದ್ಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿರುವುದರಿಂದ ನದಿ ನೀರಿನ ಪ್ರಮಾಣವು ಇಳಿಕೆಯಾಗಿದೆ. ನದಿ ನೀರಿನ ಮಟ್ಟ ತಗ್ಗಿದ್ದರಿಂದ ಮಹಿಳೆಯರು ಹೇಮಾವತಿ ನದಿಗೆ ಇಳಿದು ಗೌರಿಯನ್ನು ಕಳುಹಿಸಿಕೊಟ್ಟರು.