ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಗ್ರಾ.ಪಂ. ನೌಕರರ ಸಂಘದ ಪ್ರತಿಭಟನೆ
🎬 Watch Now: Feature Video
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿಂದು ಗ್ರಾಮ ಪಂಚಾಯತ್ ನೌಕರರ ಸಂಘ ಪ್ರತಿಭಟನೆ ನಡೆಸಿತು. ಸಿಐಟಿಯು ನೇತೃತ್ವದಲ್ಲಿ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸರ್ಕಾರ ಈ ಕೂಡಲೇ ಇಲಾಖೆಯಲ್ಲಿರುವ ನೌಕರರಿಗೆ ಭಡ್ತಿ ನೀಡಬೇಕು. ಅಲ್ಲದೆ ನೇರವಾಗಿ ನೌಕರರ ಅಕೌಂಟ್ಗೆ ವೇತನ ಪಾವತಿಸುವ ಇಐಪಿಎಂಎಸ್ ಪದ್ಧತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರು. ಹಲವು ತಿಂಗಳಿಂದ ಗ್ರಾಮ ಪಂಚಾಯತ್ ನೌಕರರಿಗೆ ವೇತನವಾಗಿಲ್ಲ. ಬಾಕಿ ವೇತನವನ್ನು ಈ ಕೂಡಲೇ ಪಾವತಿಸಬೇಕು ಮತ್ತು ನೌಕರರನ್ನ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ನೌಕರರು ಆಗ್ರಹಿಸಿದರು.