ಗ್ರಾಪಂ ಚುನಾವಣೆ ಮತ ಎಣಿಕೆ: ಹಾವೇರಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
🎬 Watch Now: Feature Video
ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಬುಧವಾರ ಮುಂಜಾನೆ 8ರಿಂದ ಸಂಜೆ 8ರವರೆಗೆ ಮತ ಎಣಿಕೆ ನಡೆಯಲಿದೆ. ಜಿಲ್ಲೆಯಲ್ಲಿ 209 ಪಂಚಾಯಿತಿಗಳ ಮತ ಎಣಿಕೆಗೆ 325 ಟೇಬಲ್‌ಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಟೇಬಲ್‌ಗೆ ನಾಲ್ಕು ಸಿಬ್ಬಂದಿಯಂತೆ 1,300 ಸಿಬ್ಬಂದಿಯನ್ನ ಮತ ಎಣಿಕೆಗೆ ನಿಯೋಜಿಸಲಾಗಿದೆ. ಹಾವೇರಿ ತಾಲೂಕಿನ ಮತ ಎಣಿಕೆ ನಡೆಯುವ ಶಿವಲಿಂಗೇಶ್ವರ ಮಹಿಳಾ ಕಾಲೇಜಿನಲ್ಲಿ ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ.