ಭುವನೇಶ್ವರಿ ತಾಯಿಗೆ ಅಭಿಷೇಕ: ಬೆಳಗಾವಿಯಲ್ಲಿ ಕಳೆಗಟ್ಟಿದ ಕರ್ನಾಟಕ ರಾಜ್ಯೋತ್ಸವ - karnataka rajyotsava in haveri
🎬 Watch Now: Feature Video
ಬೆಳಗಾವಿ/ಹಾವೇರಿ: ಕುಂದಾನಗರಿಯಲ್ಲಿ ಭುವನೇಶ್ವರಿ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಅತ್ಯಂತ ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸಲಾಯಿತು. ನಗರ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ಯುವ ವೇದಿಕೆಯಿಂದ ನಿರ್ಮಾಣ ಮಾಡಲಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಭುವನೇಶ್ವರಿ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವ ಹಬ್ಬಕ್ಕೆ ಚಾಲನೆ ನೀಡಿದರು. ಇನ್ನು ಹಾವೇರಿ ಜಿಲ್ಲೆಯಾದ್ಯಂತ 64 ನೇ ರಾಜ್ಯೋತ್ಸವವನ್ನ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಜಿಲ್ಲಾಕೇಂದ್ರ ಹಾವೇರಿಯ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ನಡೆಡ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಧ್ವಜಾರೋಹಣ ನೇರವೇರಿಸಿದರು. ಈ ಸಂದರ್ಭದಲ್ಲಿ ವಿವಿಧ ಪಡೆಗಳ ಆಕರ್ಷಕ ಪಥಸಂಚಲನ ಗಮನ ಸೆಳೆಯಿತು. ಪೊಲೀಸ್ ಇಲಾಖೆ, ಹೋಮ್ ಗಾರ್ಡ್ ಮತ್ತು ಕಾಲೇಜು ವಿದ್ಯಾರ್ಥಿಗಳ ಪ್ಲಟೋನ್‌ಗಳು ಜಿಲ್ಲಾಧಿಕಾರಿಗೆ ಗೌರವ ವಂದನೆ ಸಲ್ಲಿಸಿದರು.