ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ಸುಟ್ಟು ಕರಕಲಾಯ್ತು ಕಿರಾಣಿ ಅಂಗಡಿ - karwar latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11015699-thumbnail-3x2-nin.jpg)
ಕಾರವಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಿರಾಣಿ ಅಂಗಡಿಗೆ ಬೆಂಕಿ ತಗುಲಿರುವ ಘಟನೆ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬಸ್ ನಿಲ್ದಾಣ ಸಮೀಪದ ಅಶೋಕ ಮಹಾಲೆ ಎಂಬುವವರ ಮಾಲೀಕತ್ವದ ಅಂಗಡಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಂಗಡಿಯಲ್ಲಿದ್ದ ದಿನಸಿ ವಸ್ತುಗಳು ಸುಟ್ಟು ಕರಕಲಾಗಿವೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.