ಹಾಸನ: ಸರ್ಕಾರಿ ನೌಕರರಿಗೆ ಕಡ್ಡಾಯ ಕೊರೊನಾ ಪರೀಕ್ಷೆ - ಸರ್ಕಾರಿ ನೌಕರರಿಗೆ ಕೊರೊನಾ ಪರೀಕ್ಷೆ
🎬 Watch Now: Feature Video
ಹಾಸನ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಿಸಲು ನಿರ್ಧರಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸರ್ಕಾರಿ ಅಧಿಕಾರಿಗಳು, ನೌಕರರ ಗಂಟಲು ದ್ರವ ಪರೀಕ್ಷೆಗೆ ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯತ್ ಕಚೇರಿಗೆ ಪ್ರತಿನಿತ್ಯ ಸಾರ್ವಜನಿಕರು ಭೇಟಿ ನೀಡುತ್ತಿರುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮತ್ತು ಜಿಲ್ಲಾ ಪಂಚಾಯತ್ ಕಚೇರಿ ಸಿಬ್ಬಂದಿಗೆ ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.