ಹಾಸನ: ಸಂಜೀವಿನಿ ಸಹಕಾರಿ ಆಸ್ಪತ್ರೆ ಚುನಾವಣೆಯಲ್ಲಿ, ಅಭ್ಯರ್ಥಿಗಳ ನಡುವೆ ಮಾತಿನ ಚಕಮಕಿ.. - ಸಂಜೀವಿನಿ ಸಹಕಾರಿ ಆಸ್ಪತ್ರೆ
🎬 Watch Now: Feature Video
ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಚುನಾವಣೆಯು ಶನಿವಾರದಂದು ಸದ್ದು ಮಾಡಿದೆ. ಸಂಸ್ಥೆಯ ಅಭಿವೃದ್ಧಿಗಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಲು ಚುನಾವಣೆಗೆ ಅನೇಕ ಅಭ್ಯರ್ಥಿಗಳು ಸ್ಪರ್ಧೆಯ ಕಣದಲ್ಲಿದ್ದರು. ಶನಿವಾರ ಬೆಳಗ್ಗೆ 9 ಗಂಟೆಗೆ ಪ್ರಾರಂಭವಾದ ಮತದಾನವು ಸಂಜೆ 4 ರವರೆಗೂ ನಡೆಯಿತು. ಅಭ್ಯರ್ಥಿಗಳು ಪ್ರಚಾರದಲ್ಲಿದ್ದಾಗ ಎರಡು ಕಡೆಯಿಂದ ಕೆಲ ಸಮಯ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಶಾಂತಿಗೊಳಿಸುವಲ್ಲಿ ಯಶಸ್ವಿಯಾದರು.