ಗಂಗಾವತಿ: ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಬಹಿರಂಗ ಧರಣಿ - ನೌಕರರಿಂದ ಬಹಿರಂಗ ಧರಣಿ
🎬 Watch Now: Feature Video
ಗಂಗಾವತಿ: ಆರೋಗ್ಯ ಇಲಾಖೆ ಹಾಗೂ ಉನ್ನತ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರು ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ತಹಶೀಲ್ ಕಚೇರಿಯಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಪರಣ್ಣ ಮುನವಳ್ಳಿ ಅಹವಾಲು ಆಲಿಸಿದರು. ಬಳಿಕ ತಹಶೀಲ್ದಾರ್ ರೇಣುಕಾ ಅವರೊಂದಿಗೆ ಜಂಟಿಯಾಗಿ ಮನವಿ ಸ್ವೀಕರಿಸಿ ಹೋರಾಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು.