ಕೊರೊನಾ ಆತಂಕ ಬೇಡ, ಮುಂಜಾಗ್ರತೆ ವಹಿಸಿ: ಆರೋಗ್ಯ ಅಧಿಕಾರಿ ಸಲಹೆ - ಶಿವಮೊಗ್ಗ ಜಿಲ್ಲಾಡಳಿತ
🎬 Watch Now: Feature Video
ಶಿವಮೊಗ್ಗ: ಚೀನಾದ ಮೂಲಕ ಪ್ರಪಂಚದಾದ್ಯಂತ ತನ್ನ ಕಬಂಧ ಬಾಹುಗಳನ್ನು ವಿಸ್ತರಣೆ ಮಾಡಿಕೊಳ್ಳುತ್ತಿರುವ ಕೊರೊನಾ ವೈರಸ್ ಈಗ ಭಾರತಕ್ಕೂ ಹರಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಮುಂಜಾಗ್ರತ ಕ್ರಮ ತೆಗೆದುಕೊಂಡಿದ್ದು, ಕೊರೊನಾ ಕುರಿತು ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.