ಮಂಡ್ಯದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ: ಪ್ರತ್ಯಕ್ಷ ವರದಿ
🎬 Watch Now: Feature Video
ಮಂಡ್ಯ: 2 ದಿನ ಸಂಪೂರ್ಣ ಲಾಕ್‌ಡೌನ್ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿರುವ ಹಿನ್ನೆಲೆ ಮಂಡ್ಯದ ಎಪಿಎಂಸಿ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲಾಡಳಿತ ವಾರದಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಿದೆ. ಈ ನಡುವೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿರುವುದರಿಂದ ಸಾಮಾಜಿಕ ಅಂತರ ಮರೆತು ತರಕಾರಿ, ಹಣ್ಣು ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಕೆಲವರು ಮಾಸ್ಕ್ ಧರಿಸದೆ ಓಡಾಟ ನಡೆಸುತ್ತಿದ್ದರೂ ಜಿಲ್ಲಾಡಳಿತ ಕೈಚೆಲ್ಲಿ ಕುಳಿತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡುವ ಭೀತಿ ಎದುರಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.