ಮುದ್ದೇಬಿಹಾಳ ತಾಲೂಕಿನಾದ್ಯಂತ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ - ಮುದ್ದೇಬಿಹಾಳ ಮಳೆ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8943221-700-8943221-1601097558931.jpg)
ಮುದ್ದೇಬಿಹಾಳ: ಪಟ್ಟಣದಲ್ಲಿ ಮಧ್ಯ ರಾತ್ರಿಯಿಂದ ಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳ್ಳಂಬೆಳಗ್ಗೆ ಹಾಲು, ದಿನಪತ್ರಿಕೆ ವಿತರಕರಿಗೆ ಸುರಿಯುತ್ತಿರುವ ಮಳೆಯಿಂದ ಸೇವೆ ಒದಗಿಸುವಲ್ಲಿ ವ್ಯತ್ಯಯವಾಗಿದೆ. ಭಾರೀ ಮಳೆಯಿಂದಾಗಿ ರೈತಾಪಿ ವರ್ಗದವರು ಆತಂಕಕ್ಕೆ ಒಳಗಾಗಿದ್ದು, ಬೆಳೆದಿರುವ ಬೆಳೆ ಹೊಲದಲ್ಲಿ ಕೊಳೆಯುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಸರ್ವೆ ನಡೆಸಿ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.