ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಮಳೆ: ಸಂಕಷ್ಟದಲ್ಲಿ ಜನಜೀವನ - Netravati, Kumaradhara rivers
🎬 Watch Now: Feature Video
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆ ಇಂದೂ ಕೂಡಾ ಮುಂದುವರಿದಿದೆ. ಹೀಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ನಿನ್ನೆ ರಾತ್ರಿವರೆಗೆ ಧಾರಾಕಾರವಾಗಿ ಸುರಿದಿದ್ದ ಮಳೆ ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಸ್ವಲ್ಪ ಬಿಡುವು ನೀಡಿತ್ತು. ಆದರೆ, ಮಧ್ಯಾಹ್ನ ಬಳಿಕ ಮತ್ತೆ ಆರ್ಭಟಿಸುತ್ತಿದೆ. ಎಡೆಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ನೇತ್ರಾವತಿ, ಕುಮಾರಧಾರಾ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿ ಜನಜೀವನ ಅಸ್ತವ್ಯಸ್ತವಾಗಿದೆ.