ಹಾಸನದಲ್ಲಿ ಮತ್ತೆ ಅಬ್ಬರಿಸಿದ ಮಳೆ... ಮನೆಗಳಿಗೆ ನೀರು ನುಗ್ಗಿ ಅವಾಂತರ - ಹಾಸನ ಜಿಲ್ಲೆಯಲ್ಲಿ ಮಳೆ ಸುದ್ದಿ
🎬 Watch Now: Feature Video
ಹಾಸನ ಜಿಲ್ಲೆಯಲ್ಲಿ ಮತ್ತೊಮ್ಮೆ ಮಳೆ ಅಬ್ಬರಿಸಿದೆ. ವರುಣನ ಆರ್ಭಟಕ್ಕೆ ನಗರದ ರಸ್ತೆಗಳೆಲ್ಲ ಜಲಾವೃತವಾಗಿ, ಮನೆಗಳಿಗೆ ನೀರು ನುಗ್ಗಿತ್ತು. ಇದರಿಂದ ನಗರ ನಿವಾಸಿಗಳು ಹೈರಾಣಾಗಿದ್ದಾರೆ. ಹಾಸನ ನಗರ ಮತ್ತು ಹೊರವಲಯದಲ್ಲಿ ಭಾರಿ ಮಳೆಯಾಗಿದ್ದು, 5 ದಿನಗಳಿಂದ ಬಿಡುವು ನೀಡಿದ್ದ ವರುಣ ಮತ್ತೆ ದರ್ಶನ ನೀಡಿದ್ದಾನೆ. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಮತ್ತೊಂದೆಡೆ ಅವಧಿಗೂ ಮುನ್ನವೇ ಹೇಮಾವತಿ ಜಲಾಶಯ ತುಂಬಿ ಹರಿದಿದ್ದರಿಂದ ಜಿಲ್ಲೆ ಅಷ್ಟೇ ಅಲ್ಲದೆ ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳ ರೈತರು ಖುಷಿಯಾಗಿದ್ದಾರೆ.
Last Updated : Nov 7, 2019, 8:26 PM IST