ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ವರುಣನ ಅಬ್ಬರ - ಬೆಂಗಳೂರು ಮಳೆ
🎬 Watch Now: Feature Video
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ನಗರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಗುರುವಾರ ರಾತ್ರಿ ಮೆಜೆಸ್ಟಿಕ್ ಸುತ್ತಮುತ್ತ, ಬಸವನಗುಡಿ, ತ್ಯಾಗರಾಜನಗರ, ಜಯನಗರ ಬನಶಂಕರಿ ಸೇರಿದಂತೆ ಬೆಂಗಳೂರು ದಕ್ಷಿಣದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಅಲ್ಲದೆ ಮುಂದಿನ ಮೂರು-ನಾಲ್ಕು ದಿನ ಬೆಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್ ರೆಡ್ಡಿಯವರು 'ಈಟಿವಿ ಭಾರತ'ಕ್ಕೆ ತಿಳಿಸಿದ್ದಾರೆ.