ಮಲೆನಾಡಿನಲ್ಲಿ ಮತ್ತೆ ಮಳೆರಾಯನ ಆರ್ಭಟ ! ದಿಕ್ಕೆಟ್ಟ ಜನ - latest chickmagalur news
🎬 Watch Now: Feature Video
ಕಳೆದ ಕೆಲವು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ಮಳೆ ಮತ್ತೆ ಪ್ರಾರಂಭವಾಗಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಣಕಲ್, ಬಾಳೂರು, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದ್ದು ಜನ ಭಯಭೀತರಾಗಿದ್ದಾರೆ. ಇನ್ನು ಬಯಲು ಸೀಮೆಯ ತರೀಕೆರೆಯಲ್ಲಿ ಮಳೆಯ ರಭಸಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಪ್ರಮುಖ ರಸ್ತೆಯಲ್ಲಿ ಒಂದು ಅಡಿಗೂ ಅಧಿಕ ನೀರು ನಿಂತಿದ್ದು ವಾಹನ ಸವಾರರು ಪರದಾಟ ನಡೆಸಿದ್ದಾರೆ. ನಿರಂತರ ಮಳೆಯ ಕಾರಣದಿಂದಾಗಿ ಹಲವಾರು ಬಡಾವಣೆಯಲ್ಲಿ ವಿದ್ಯುತ್ ಸಂಪರ್ಕದಲ್ಲಿಯೂ ವ್ಯತ್ಯಯ ಕಂಡು ಬರುತ್ತಿದೆ.