ವರುಣನ ಆರ್ಭಟ: ಕೊಚ್ಚಿ ಹೋದ ಬಂಕೇನಹಳ್ಳಿ ಸೇತುವೆ
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವರುಣನ ಆರ್ಭಟಕ್ಕೆ ತಾಲೂಕಿನಲ್ಲಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಮೂಡಿಗೆರೆ ತಾಲೂಕಿನಲ್ಲಿರುವ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿದ್ದು, ಸುಮಾರು ಐದು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿದೆ. ನೂರಾರು ಕುಟುಂಬಗಳು ಈ ಭಾಗದಲ್ಲಿ ವಾಸ ಮಾಡುತ್ತಿವೆ. ಕಳೆದ ವರ್ಷವೂ ಈ ಸೇತುವೆ ಮಹಾ ಮಳೆಗೆ ಕೊಚ್ಚಿ ಹೋಗಿತ್ತು. ಆದರೆ ಇಲ್ಲಿನ ಗ್ರಾಮಸ್ಥರು ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ ಮಾಡಿಕೊಂಡಿದ್ದರು. ಈ ವರ್ಷ ಸುರಿದ ಮಳೆಗೆ ಸೇತುವೆಯೂ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಬಂಕೇನಹಳ್ಳಿ ಗ್ರಾಮಸ್ಥರು ಅತಂತ್ರರಾಗಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ಬಂಕೇನಹಳ್ಳಿ ಗ್ರಾಮದ ನಂದೀಶ್ ಅವರ ಜೊತೆ ನಡೆಸಿದ ಚಿಟ್ ಚಾಟ್ ಇಲ್ಲಿದೆ..