ದಾವಣಗೆರೆಯಲ್ಲಿ ಮಳೆ ಅಬ್ಬರ... ಬೆಳೆಗಳು ಜಲಾವೃತ, ರೈತರಿಗೆ ಸಂಕಷ್ಟ - heavy rain news

🎬 Watch Now: Feature Video

thumbnail

By

Published : Sep 9, 2020, 12:40 PM IST

ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ. ಹರಿಹರ ತಾಲೂಕಿನ ಸಂಕ್ಲೀಪುರ-ಗುಳದಹಳ್ಳಿ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಮೇಲೆ‌ ನೀರು ಹರಿಯುತ್ತಿದ್ದು, ಸಂಚಾರ ಬಂದ್ ಆಗಿದೆ. ದಾವಣಗೆರೆ ತಾಲೂಕಿನ ದೇವರ ಬೆಳಕೆರೆ ಕೆರೆಗೆ ಈ ನೀರು ಹರಿದು ಬರುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಭತ್ತ, ಜೋಳ ಸೇರಿದಂತೆ ಇತರೆ ಬೆಳೆಗಳು ನೀರಿನಿಂದ ಆವೃತವಾಗಿದ್ದು, ರೈತರು‌ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.