ಜಿಲ್ಲೆಯಲ್ಲಿ ಧಾರಾಕಾರ ಮಳೆ : ಕೆರೆ ಒಡೆದು ರೈತರ ಜಮೀನಿಗೆ ನುಗ್ಗಿದ ನೀರು, ಬೆಳೆ ನಾಶ - Heavy Rain In Dharwad
🎬 Watch Now: Feature Video
ಧಾರವಾಡ : ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ಕೆರೆ-ಕಟ್ಟೆ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ನೂರಾರು ಎಕರೆಯಲ್ಲಿ ಬೆಳೆಯಲಾಗಿದ್ದ ಬೆಳೆ ಸಂಪೂರ್ಣ ಜಲಾವೃತವಾಗಿವೆ. ಕಲಘಟಗಿ ತಾಲೂಕಿನ ಹಟಕಿನಾಳದ ಗ್ರಾಮದ ಜಿಗಳಿ ಎಂಬ ಕೆರೆಯ ಒಡ್ಡು ಒಡೆದು ಈ ಅವಾಂತರ ಸೃಷ್ಟಿಯಾಗಿದೆ. ಭತ್ತ, ಸೋಯಾಬಿನ್, ಕಬ್ಬು, ಹತ್ತಿ, ಗೋವಿನಜೋಳ ಸೇರಿ ಇತರೆ ಬೆಳೆಗಳು ಜಲಾವೃತಗೊಂಡಿವೆ. ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಯಿಂದ ಕೆರೆಗಳು ತುಂಬಿವೆ. ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರೈತರಲ್ಲಿ ಮತ್ತಷ್ಟು ಬೆಳೆ ಜಲಾವೃತವಾಗುವ ಆತಂಕ ಎದುರಾಗಿದೆ.