ಚನ್ನರಾಯಪಟ್ಟಣದಲ್ಲಿ ಗುಡುಗು ಸಹಿತ ಭಾರಿ ಮಳೆ: ಅಂಗಡಿ ಮುಂಗಟ್ಟುಗಳು ಜಲಾವೃತ - Heavy Rain In Hassan
🎬 Watch Now: Feature Video
ಚನ್ನರಾಯಪಟ್ಟಣ (ಹಾಸನ): ನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಇಂದು ಸಂಜೆ ಗುಡುಗು ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಳೆರಾಯನ ಆರ್ಭಟಕ್ಕೆ ಚರಂಡಿಗಳು ತುಂಬಿ ರಸ್ತೆಯ ಮೇಲೆ ನೀರು ಹರಿದಿದ್ದು ವಾಹನ ಸವಾರರು ಹಾಗೂ ರಸ್ತೆ ಬದಿ ವ್ಯಾಪಾರಸ್ಥರು ಮಳೆಯಿಂದ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ದೃಶ್ಯ ಕಂಡು ಬಂದಿತು. ಇನ್ನು ಶ್ರವಣಬೆಳಗೊಳದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು ಅಂಗಡಿ ಮುಂಗಟ್ಟುಗಳು ಜಲಾವೃತವಾಗಿವೆ. ಕೆಲವಡೆ ಮಳೆಯಿಂದ ಹಾನಿ ಆಗಿರುವ ವರದಿಯಾಗಿದೆ.