ಹಾವೇರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಧರೆಗುರುಳಿದ ಮರ, ವಿದ್ಯುತ್ ಕಂಬಗಳು - Haveri District
🎬 Watch Now: Feature Video
ಹಾವೇರಿ ಜಿಲ್ಲೆಯ ವಿವಿಧಡೆ ಶುಕ್ರವಾರ ಸಂಜೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಭಾರಿ ಮಳೆ ಜೊತೆಗೆ ಬಿರುಗಾಳಿಯು ಬೀಸಿದ್ದರಿಂದ ವಿದ್ಯುತ್ ಕಂಬಗಳು ಧರೆಗುರುಳಿವೆ. ಇನ್ನು ಶಿಗ್ಗಾವಿಯಲ್ಲಿ ಗಾಳಿ ರಭಸಕ್ಕೆ ಮನೆಯ ಛಾವಣೆಗಳು ಹಾರಿಹೋಗಿದ್ದು ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಕೆಲವಡೆ ಮಳೆ ನೀರು ಚರಂಡಿ ತುಂಬಿ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿ ಹರಿದಿದ್ದರಿಂದ ಸಾರ್ವಜನಿಕರು ಪರದಾಡುವಂತಾಯಿತು. ಕೆಲವಡೆ ಮರಗಳ ಧರೆಗುರುಳಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.