ಹುಬ್ಬಳ್ಳಿ - ಧಾರವಾಡದಲ್ಲಿ ವರ್ಷದ ಮೊದಲ ಮಳೆ ಸಿಂಚನ: ತಂಪೆರೆದ ವರುಣದೇವ - ಹುಬ್ಬಳ್ಳಿ ಧಾರವಾಡದಲ್ಲಿ ಭಾರಿ ಮಳೆ,
🎬 Watch Now: Feature Video
ಧಾರವಾಡ ಜಿಲ್ಲೆಯಲ್ಲಿ ಬಿರು ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರ್ಷದ ಮೊದಲ ಮಳೆಯ ಆಘಾತ ನೀಡಿದೆ. ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದ ಬಹುತೇಕ ಕಡೆಗಳಲ್ಲಿ ಸುಮಾರು ಎರಡು ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗಿದೆ. ಗಾಳಿಗೆ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದಿದ್ದು, ಕಾರು ಜಖಂಗೊಂಡಿದೆ. ಕೆಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ಹುಬ್ಬಳ್ಳಿ ಜನತೆಗೆ ಮಳೆರಾಯ ತಂಪು ನೀಡಿದ್ದಾನೆ. ಮಳೆ ಹಾಗೂ ಗಾಳಿ ಒಟ್ಟಿಗೆ ಬಂದಿರುವ ಪರಿಣಾಮ ಹುಬ್ಬಳ್ಳಿ ಮಹಾನಗರ ಪಾಲಿಕೆ ಆವರಣದಲ್ಲಿದ್ದ ಮರವೊಂದು ಹಠಾತ್ ಆಗಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮರ ಬಿದ್ದಿರುವುದರಿಂದ ಕೆಲಹೊತ್ತು ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳಕ್ಕೆ ದೌಡಾಯಿಸಿದ ಪಾಲಿಕೆ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು.
Last Updated : Apr 10, 2021, 2:10 PM IST