ವರುಣನ ಆರ್ಭಟಕ್ಕೆ ನಲುಗಿದ ಉತ್ತರ ಕನ್ನಡ... ಜನರಲ್ಲಿ ಆತಂಕ - ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ
🎬 Watch Now: Feature Video
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಕದ್ರಾ ಜಲಾಶಯದಿಂದ ನಿರಂತರವಾಗಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕಾಳಿನದಿಯಂಚಿನ ಮನೆಗಳು ಮುಳುಗಡೆಯಾಗಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಇನ್ನು 1.4 ಲಕ್ಷ ಕ್ಸೂಸೆಕ್ ನೀರನ್ನು ಹೊರಬಿಡುವುದಾಗಿ ಜಿಲ್ಲಾಡಳಿತ ಸೂಚಿಸಿದ್ದು, ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ. ಅಲ್ಲದೆ ಕಾರವಾರದ ಮಲ್ಲಾಪುರ ಭಾಗದಲ್ಲಿ ಹತ್ತಾರು ಮನೆಗಳು ಮುಳುಗಡೆಯಾಗಿದ್ದು, ಸುರಕ್ಷಿತ ಸ್ಥಳದಲ್ಲಿರುವ ಸುಮಾರು 400 ಕುಟುಂಬಗಳಿಗೆ ಸಂಪೂರ್ಣ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...
Last Updated : Aug 6, 2019, 6:52 PM IST