ಉತ್ತರಕನ್ನಡದಲ್ಲಿ ಮುಂದುವರಿದ ಗಾಳಿ ಸಹಿತ ಮಳೆ - uttar kannada district news
🎬 Watch Now: Feature Video
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು, ಇಂದು ಬೆಳಗ್ಗೆಯಿಂದಲೇ ಗಾಳಿ ಸಹಿತ ಭಾರಿ ಮಳೆಯಾಗತೊಡಗಿದೆ. ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ನಿನ್ನೆಯಿಂದ ಎಡಬಿಡದೇ ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಕಾರವಾರದಲ್ಲಿ ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.